ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈಗಾಗಲೇ ಗ್ರೇಸ್ ಮಾರ್ಕ್ಸ್ ಕೊಡಬೇಡಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10ನೇ ತರಗತಿ ಮಕ್ಕಳಿಗೆ ಶೇ20 ರಷ್ಟು ಕೃಪಾಂಕ ನೀಡಿತ್ತು. ಆದರೂ ಕೂಡ ಕಳೆದ ವರ್ಷಕ್ಕಿಂತ ಈ ವರ್ಷ ಶೇ10 ರಷ್ಟು ಕುಸಿತವಾಗಿದೆ. ಈ ಕೃಪಾಂಕ ನೀಡಿದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ಇದೀಗ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೃಪಾಂಕಕ್ಕೆ ಬ್ರೇಕ್ ಹಾಕಿದ್ದಾರೆ.