ಬೆಂಗಳೂರು: ಭಾರತದಲ್ಲಿರುವ ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು (Mohamed Muizzu) ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ (Bengaluru Airport) ಅವರನ್ನ ಸಚಿವ ಡಾ.ಎಂ.ಸಿ ಸುಧಾಕರ್ (MC Sudhakar) ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಖಾಸಗಿ ಹೊಟೇಲಿನಲ್ಲಿ ವಿಶ್ರಾಂತಿಗೆ ತೆರಳಿದ ಮಾಲ್ಡೀವ್ಸ್ ಅಧ್ಯಕ್ಷರು, ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನ ಭೇಟಿ ನೀಡಲಿದ್ದಾರೆ.
ಕಳೆದ ನವೆಂಬರ್ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾಲ್ಡೀವ್ಸ್ ಅಧ್ಯಕ್ಷ ಮೊಹ್ಮದ್ ಮುಯಿಝು ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಇದೇ ಅಕ್ಟೋಬರ್ 7ರಂದು ಅವರನ್ನ ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಯಾವಾಗಲೂ ಮಾಲ್ಡೀವ್ಸ್ಗೆ ಮೊದಲ ಆದ್ಯತೆ ನೀಡುತ್ತದೆ ಎಂದು ಭರವಸೆ ನೀಡಿದ್ದರು. ಇದೇ ವೇಳೆ ಮಾಲ್ಡೀವ್ಸ್ಗೆ ಭೇಟಿ ನೀಡುವಂತೆ ಮುಯಿಝು ಪ್ರಧಾನಿ ಮೋದಿಗೆ ಆಹ್ವಾನ ನೀಡಿದರು. ನಿನ್ನೆ ತಾಜ್ ಮಹಲ್ಗೆ ಭೇಟಿ ನೀಡಿದ್ದರು