ಗದಗ: ಗದಗ ಜಿಲ್ಲೆಯ ನರಗುಂದ ಪಟ್ಟಣದ ಸರ್ವಜ್ಞ ಸರ್ಕಲ್ ಬಳಿ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಜೋತಿಬಾ, ಅಕ್ಬರ್ ಎಂಬುವರ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು,
ನವರಾತ್ರಿಯ 7ನೇ ದಿನ “ದೇವಿ ಕಾಲರಾತ್ರಿ” ಪೂಜೆ ಮಾಡಿ ಬದುಕಿನಲ್ಲಿ ಪೂರ್ಣಪ್ರಮಾಣದ ಅಭಿವೃದ್ಧಿ ಪಡೆಯಿರಿ.!
ನಡುರಸ್ತೆಯಲ್ಲಿ ಬೈಕ್ ಸವಾರರು ನರಳಾಡಿದ್ದಾರೆ. ಅಂಬುಲೆನ್ಸ್ ಸಕಾಲಕ್ಕೆ ಬಾರದೇ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದು, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.