ಬೆಂಗಳೂರು:- ಕರ್ನಾಟಕದ ಹಲವೆಡೆ ಮುಂದಿನ ಒಂದು ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದೇವಿ ದುರ್ಗೆಗೆ 10 ಕೈಗಳು ಇರೋದು ಯಾಕೆ ಗೊತ್ತಾ? ಒಂದೊಂದು ಆಯುಧದ ಅರ್ಥ ನೀವು ತಿಳಿಯಲೇಬೇಕು!
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಮಂಡ್ಯ, ಮೈಸೂರು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಕಿರವತ್ತಿ, ಕೊಲ್ಲೂರು, ಹುಂಚದಕಟ್ಟೆ, ಮುಂಡಗೋಡು, ಕದ್ರಾ, ಸಿದ್ದಾಪುರ, ತ್ಯಾಗರ್ತಿ, ಜಯಪುರ, ಎನ್ಆರ್ಪುರ, ಬನವಾಸಿ, ಕಾರವಾರ, ಲೋಂಡಾ, ಆಗುಂಬೆ, ಹಿರೇಕೆರೂರು, ಕೊಟ್ಟಿಗೆಹಾರ, ಹಳಿಯಾಳ, ಯಲ್ಲಾಪುರ, ಕುಂದಗೋಳ, ಹಾವೇರಿ, ಶೃಂಗೇರಿ, ಕೊಪ್ಪ, ಮೂಡಿಗೆರೆ, ಕುಮಟಾ, ಬೆಳಗಾವಿ, ಕಳಸ, ಬಾಳೆಹೊನ್ನೂರು, ದಾವಣಗೆರೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.