ಗದಗ: ಭಾರತೀಯ ಜನತಾ ಪಾರ್ಟಿ ಸದಸ್ಯತಾ ಅಭಿಯಾನದ ವಿಶೇಷ ಸಭೆ ಹಿನ್ನೆಲೆ ಗದಗನ ಬಿಜೆಪಿ ಜಿಲ್ಲಾ ಕಚೇರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗಮಿಸಿದ್ರು.
ಇದೇ ವೇಳೆ ಬಿಜೆಪಿ ಸದಸ್ಯತ್ವದ ಕುರಿತು ಬಿ ವೈ ವಿಜಯೇಂದ್ರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ರು. ಇದುವರೆಗೂ ಗದಗ ಜಿಲ್ಲೆಯಲ್ಲಿ ಬಿಜೆಪಿ ಸದಸ್ಯತ್ವ ಅಂಕಿ ಸಂಖ್ಯೆಗಳನ್ನ ಪಡೆದುಕೊಂಡು ಹೆಚ್ಚೆಚ್ವು ಬಿಜೆಪಿ ಸದಸ್ಯರನ್ನ ಮಾಡೋ ಮೂಲಕ ಬಿಜೆಪಿಗೆ ಬಲ ತುಂಬಬೇಕೆಂದ್ರು.
ಸಭೆಯಲ್ಲಿ ಮಾಜಿ ಸಚಿವ, ಶಾಸಕ ಸಿ ಸಿ ಪಾಟೀಲ್, ಕಳಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಸೇರಿದಂತೆ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.