ಬೆಂಗಳೂರು:- ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬಾಂಗ್ಲಾ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್: ಟೀಮ್ ಇಂಡಿಯಾ ಪರ ಹೊಸ ದಾಖಲೆ ಬರೆದ ನಿತೀಶ್ ರೆಡ್ಡಿ!
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ರತನ್ ಟಾಟಾ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ಟಾಟಾ ಅವರ ಲೋಕೋಪಕಾರಿ ಮತ್ತು ಕೈಗಾರಿಕೋದ್ಯಮಿದ ಪರಂಪರೆಯು ದೇಶದ ಅಸಂಖ್ಯಾತ ಜನರ ಜೀವನ ಹಾಗೂ ಸಮುದಾಯಗಳ ಮೇಲೆ ಪ್ರಭಾವವನ್ನು ಬೀರಿದೆ. ಅವರ ದೂರದೃಷ್ಟಿ, ಸಹಾನುಭೂತಿ ಮತ್ತು ಸಾಮಾಜಿಕ ಕಾರ್ಯಗಳ ಮೂಲಕ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಅವರ ಕುಟುಂಬಕ್ಕೆ ಸಂತಾಪಗಳು ಎಂದು ಹೇಳಿದ್ದಾರೆ.
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ರತನ್ ಟಾಟಾ ಒಬ್ಬ ಅತ್ಯುತ್ತಮ ನಾಯಕ. ದೇಶಕ್ಕೆ ಅವರ ಕೊಡುಗೆ ಅಪಾರ. ಟಾಟಾ ಸಂಸ್ಥೆಗಳ ಹೆಸರನ್ನು ಉನ್ನತ ಸ್ಥಾನಕ್ಕೆ ಏರಿಸಿದ ಕೀರ್ತಿ ರತನ್ ಟಾಟಾ ಅವರಿಗೆ ಸಲ್ಲುತ್ತದೆ. ಟಾಟಾ ಸಮೂಹ ಸಂಸ್ಥೆಗಳ ಸಿಬ್ಬಂದಿಗೆ ನಮ್ಮ ಸಂತಾಪಗಳು ಅಂತ ಪೋಸ್ಟ್ ಮಾಡಿದ್ದಾರೆ
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ರತನ್ ಟಾಟಾ ತಮ್ಮ ಸರಳತೆಯಿಂದಲೇ ಮನೆಮಾತಾದವರು. ಸರಳತೆ, ಸಹಾನುಭೂತಿ, ಸಮಗ್ರತೆಯನ್ನು ಜೀವನದುದ್ದಕ್ಕೂ ಪಾಲಿಸಿದ ರತನ್ ಟಾಟಾ ಅವರ ಬದುಕು ನೆನೆಯುತ್ತಾ, ರತನ್ ಟಾಟಾ ಕುಟುಂಬ ವರ್ಗ ಹಾಗೂ ಅವರ ಆತ್ಮೀಯರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಅಂತ ಪೋಸ್ಟ್ ಮಾಡಿದ್ದಾರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್ನನಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದು, ಕೆಲವರು ಕಾಲದ ಮರಳಿನ ಮೇಲೆ ಹೆಜ್ಜೆಗುರುತುಗಳನ್ನು ಬಿಡುತ್ತಾರೆ, ಆದರೆ ರತನ್ ಟಾಟಾ ಅವರು ನಮ್ಮ ರಾಷ್ಟ್ರದ ರಚನೆಯ ಮೇಲೆ ತಮ್ಮ ಗುರುತನ್ನು ಮೂಡಿಸಿದ್ದಾರೆ. ಅವರು ದೂರದೃಷ್ಟಿಯ ವ್ಯಾಪಾರ ನಾಯಕ, ಸಹಾನುಭೂತಿಯ ಆತ್ಮ ಮತ್ತು ಅಸಾಧಾರಣ ಮನುಷ್ಯ. ರತನ್ ಟಾಟಾ ಅವರು ದೊಡ್ಡ ಕನಸುಗಳನ್ನು ಕಾಣಲು ಮತ್ತು ಅವುಗಳನ್ನು ಸಾಧಿಸಲು ಸಮರ್ಪಿತರಾಗಿದ್ದರು. ವ್ಯಾಪಾರ, ಪರೋಪಕಾರ ಮತ್ತು ನಮ್ರತೆಯಲ್ಲಿ ಅವರ ಪರಂಪರೆ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.