ಕೋಲಾರ: ವಿವಿಧ ವೃಂದಗಳ ನೌಕರರಿಗೆ ಸಕಾಲಕ್ಕೆ ಬಡ್ತಿ ನೀಡುವುದು, ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ನೌಕರರ ಅನಿರ್ದಿಷ್ಟಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ. ಕೋಲಾರ ಜಿಲ್ಲೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಅಪರೇಟರ್ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು ನಗರದ ಜಿಲ್ಲಾ ಪಂಚಾಯತಿ ಕರಾವಳಿ ಆವರಣದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಚೌಡಯ್ಯ’ ಚಿತ್ರತಂಡಕ್ಕೆ ಶಾಕ್ ನೀಡಿದ ಆರ್ ಟಿ ಓ
ಪ್ರತಿಭಟನೆಯಲ್ಲಿ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ ಬಾಬು ಭಾಗವಹಿಸಿ ಬೆಂಬಲ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ ಬಾಬು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ‘ಬಿ’ ಗುಂಪಿನ ಹುದ್ದೆಗಳಾಗಿ ಉನ್ನತೀಕರಿಸಬೇಕು, ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸಬೇಕು, ವಿವಿಧ ವೃಂದಗಳ ನೌಕರರಿಗೆ ಸಕಾಲಕ್ಕೆ ಬಡ್ತಿ ನೀಡಬೇಕು, ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡಬೇಕು ಹಾಗೂ ನೇರ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಅಗ್ರಹಿಸಿದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಸರ್ಕಾರಿ ನೌಕರರ ಸಂಘ ನಿಮ್ಮ ಜೊತೆಯಲ್ಲೇ ಇರುತ್ತದೆ. ಸರ್ಕಾರಿ ನೌಕರರನ್ನು ಬೀದಿಯಲ್ಲಿ ಕೂರಿಸಿರುವುದು ಶೋಷಚನಿಯ, ಸರ್ಕಾರ ಆದಷ್ಟು ಬೇಗ ಇವರ ಸಮಸ್ಯೆಗೆ ಸ್ಪಂದಿಸಿ, ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.