ಚಲಿಸುತ್ತಿದ್ದ ಕಾರಿನಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡು ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ನಡೆದಿದ್ದು
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಕುಟುಂಬಸ್ಥರು ಕಾರಿನಿಂದ ಹೊರಬಂದಿದ್ದರಿಂದ ಯಾವುದೇ ಜೀವ ಹಾನಿಯಾಗಿಲ್ಲ.
ಗಣೇಶಪೇಟೆಯಿಂದ ಗೋಕುಲ ರಸ್ತೆ ಕಡೆಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕ್ಷಣಾರ್ಧದಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಸ್ಥಳೀಯರು ನಂದಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರೀ ಅನಾಹುತ ತಪ್ಪಿದೆ. ಸುರಿಯುವ ಮಳೆಯ ನಡುವೆಯೂ ಇಂಡಿಗೋ ಕಾರಿನಲ್ಲಿ ಏಕಾ ಏಕಿ ಹೊತ್ತಿಕೊಂಡಿದ್ದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದ್ದು, ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.