ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೇಳಿ ಬಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ವಿಚಾರ ಹೊರಬಿದ್ದಿದೆ. ಸ್ವತಃ ವಿನಯ್ ಕುಲಕರ್ಣಿ ಅವರು ಮಹಿಳೆ, ಖಾಸಗಿ ಚಾನೆಲ್ ಮುಖ್ಯಸ್ಥನ ವಿರುದ್ಧ ಬ್ಲ್ಯಾಕ್ಮೇಲ್ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಎರಡು ಎಫ್ಐಆರ್ ದಾಖಲಿಸಿ ಸಂಜಯನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ವಿನಯ್ ದೂರು ನೀಡಿದ್ದಾರೆ. ಖಾಸಗಿ ಚಾನೆಲ್ ಮುಖ್ಯಸ್ಥನ ವಿರುದ್ಧ ವಿನಯ್ ಕುಲಕರ್ಣಿ ಗಂಭೀರ ಆರೋಪ ಮಾಡಿದ್ದಾರೆ. ಕರೆ ಬಂದ ಮೊಬೈಲ್ ನಂಬರ್ ಯಾರ ಹೆಸರಲ್ಲಿದೆ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಆಡಿಯೋ ಇದ್ದರೆ ಒದಗಿಸುವಂತೆ ಕೇಳಿದ್ದಾರೆ. ಅಧಿಕಾರಿಗಳು, ರಾಜಕೀಯ ಮುಖಂಡರಿಗೆ ಮಹಿಳೆ ಬ್ಲ್ಯಾಕ್ಮೇಲ್ ಮಾಡಿದ್ದಾಗಿ ವಿನಯ್ ಕುಲಕರ್ಣಿ ಆರೋಪಿಸಿದ್ದಾರೆ.