ಬೆಂಗಳೂರು:- ಬೆಂಗಳೂರಲ್ಲಿ ಇನ್ನೂ 3 ದಿನ ಮಳೆ ಅಬ್ಬರ ಇರಲಿದ್ದು, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ, ಅದರಲ್ಲಿ ಯಾವುದೇ ಡೌಟ್ ಇಲ್ಲ: ಮಹೇಶ್ ಟೆಂಗಿನಕಾಯಿ!
ದಿನದಿಂದ ದಿನ ಕಳೆಯುತ್ತಿದ್ದಂತೆ ನಾಡಿನಾದ್ಯಂತ ಮಳೆರಾಯನ ಅಬ್ಬರ ಜೋರಾಗುತ್ತಲೇ ಇದೆ. ಕೆಲ ದಿನಗಳಿಂದ ಪ್ರತೀ ದಿನ ರಾತ್ರಿ ವೇಳೆ ಬೆಂಗಳೂರಿನೆಲ್ಲೆಡೆ ವರುಣನ ಆರ್ಭಟ ಶುರುವಾಗಿದೆ. ಇನ್ನು ಮಳೆಯ ಸಂಬಂಧ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ತೀವ್ರ ಕುಸಿತ ಕಂಡಿದೆ. ಹಾಗೂ ಆಗ್ನೇಯ ಬಂಗಾಳದಲ್ಲಿ ಸಹ ವಾಯುಭಾರ ಕುಸಿತವಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ.
ಹವಮಾನ ವೈಪರಿತ್ಯದಿಂದ ರಾಜ್ಯದ ಹಲವೆಡೆ ವರುಣನ ಆರ್ಭಟ ಜಾಸ್ತಿಯಾಗಿದೆ. ಇನ್ನು ಪೂರ್ವ ಅರಬ್ಬೀ ಸಮುದ್ರ ಹಾಗೂ ಆಗ್ನೇಯ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿದ್ದು, ಅಕ್ಟೋಬರ್ 17 ರವರೆಗೆ ರಾಜ್ಯದ ಉತ್ತರ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೆಯೇ ದೇಶದ ಹಲವು ಭಾಗಗಳಲ್ಲಿ ಸಹ ಭಾರೀ ಮಳೆ ಆಗುತ್ತಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಗುಜರಾತ್, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದೆ. ವರುಣ ಆರ್ಭಟದಿಂದ ಅನೇಕ ಕಡೆ ಹಲವು ಅವಾಂತರಗಳು ಸೃಷ್ಟಿಯಾಗಿದೆ. ಇನ್ನು ಬೆಂಗಳೂರಿನಲ್ಲಿ ಒಮ್ಮೆಲೆ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಜಲಾವೃತಗೊಳ್ಳುತ್ತಿದ್ದು, ಮರಗಳು ರಸ್ತೆ ಮಧ್ಯೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹವಾಮಾನ ವೈಪರಿತ್ಯದಿಂದ ಸಿಟಿಯಲ್ಲಿ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಹವಾಮಾನ ಇಲಾಖೆ ಅಕ್ಟೋಬರ್ 14 ಮತ್ತು 15ರಂದು ಯೆಲ್ಲೋ ಅಲರ್ಟ್ ಘೋಷಿಸಿದೆ.