ಬೆಂಗಳೂರು:- ಚನ್ನಪಟ್ಟಣ ಅಭ್ಯರ್ಥಿಯನ್ನು ಮುಂದಿನ ವಾರದಲ್ಲಿ ಫೈನಲ್ ಮಾಡ್ತೀವಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಯತ್ನ: FIR ದಾಖಲು!
ಬಿಜೆಪಿ ನಾಯಕರ ಸಹಮತದೊಂದಿಗೆ ಅವರ ಅಭಿಪ್ರಾಯ ಪಡೆದು ತೀರ್ಮಾನ ಮಾಡೋಣ ಎಂದು ಹೇಳಿದ್ದೇನೆ. ಎಲ್ಲರು ಒಟ್ಟಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇನೆ ಎಂದರು.
ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂಬ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಎಂದು 95% ನಾಯಕರು, ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾವು ಈಗ ಇರುವ ಸನ್ನಿವೇಶ ನೋಡಬೇಕು. ಏನೇನು ಬೆಳವಣಿಗೆಗಳು ಇವೆ ಎಂದು ನೋಡಬೇಕು. ನಿಖಿಲ್ ಮಂಡ್ಯದಲ್ಲಿ ನಿಲ್ಲಿಸಿದಾಗ ಎಲ್ಲಾ ಪಕ್ಷಗಳು ಒಂದಾಗಿ ಸೋಲಿಸಿದರು. ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲಾ ಒಂದಾಗಿದ್ದರು. ಅವೆಲ್ಲಾ ನೋಡಿದ್ದೇವೆ. ಚನ್ನಪಟ್ಟಣದಲ್ಲಿ ನನಗೆ ಎನ್ಡಿಎ ಅಭ್ಯರ್ಥಿ ಗೆಲ್ಲಲೇಬೇಕು. ನಿಖಿಲ್ ಅಥವಾ ಬೇರೆ ಅವರು ಅಭ್ಯರ್ಥಿ ಅನ್ನೋದಕ್ಕಿಂತ ಹೆಚ್ಚಾಗಿ ಎನ್ಡಿಎ ಅಭ್ಯರ್ಥಿ ಗೆಲುವು ಕಾಣಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದರು.