ಮುಂಬೈ: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿದ್ದಿಕ್ಕಿ ಅವರ ಹತ್ಯೆಗೆ ಸರ್ಕಾರವೇ ನೇರ ಹೊಣೆ ಎಂದು ರಾಜ್ಯ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ ನಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ರಾಗಾ, ಬಾಬಾ ಸಿದ್ದಿಕಿ ಜೀ ಅವರ ದುರಂತ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದೇನೆ,
Non-veg Recipe: ಭಾನುವಾರದ ಬಾಡೂಟಕ್ಕೆ ಮನೆಯಲ್ಲೇ ಮಾಡಿ ಆಂಧ್ರ ಸ್ಟೈಲ್ ಸ್ಪೆಷಲ್ ಚಿಕನ್ ಕರಿ!
ತುಂಬಾ ನೋವು ತಂದಿದೆ. ಈ ಕಷ್ಟದ ಸಮಯದಲ್ಲಿ ನಾವು ಅವರ ಕುಟುಂಬದೊಂದಿಗೆ ಇರುತ್ತೇವೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಈ ಭಯಾನಕ ಘಟನೆಯು ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವುದನ್ನು ಬಹಿರಂಗಪಡಿಸುತ್ತದೆ. ಸರ್ಕಾರವೇ ಇದರ ಜವಾಬ್ದಾರಿ ವಹಿಸಬೇಕು. ಸಿದ್ದಿಕಿ ಕುಟುಂಬಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.