ತುಮಕೂರು/ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ ಮಾಡಿ ವಿಶೇಷ ಬೇಡಿಕೆ ಇಟ್ಟಿದ್ದಾರೆ.
ಕನಸಿನಲ್ಲಿ ನೀರು ಕಾಣ್ತಿದ್ಯಾ!? ಹಾಗಿದ್ರೆ ಇದು ಒಳ್ಳೆಯದಾ!? ಕೆಟ್ಟದ್ದಾ!?
ಭೇಟಿ ವೇಳೆ ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವಾಲಯದಿಂದ 87 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಮೂಲಕ ಇಲಾಖೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಅತ್ಯಂತ ಸಹಕಾರ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಅಭಿನಂದನೆ ಸಲ್ಲಿಸಿ, ತುಮಕೂರು, ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಮಾರ್ಗವನ್ನು 2027ರ ಜೂನ್ ಮಾಹೆಯಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಮತ್ತು ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.