ಚಿಕ್ಕಮಗಳೂರು:- ಪ್ರವಾಸಿಗರೇ ಇದು ನೀವು ನೋಡಲೇಬೇಕಾದ ಸ್ಟೋರಿ. ಮುಳ್ಳಯ್ಯನಗಿರಿ, ಚಾರ್ಮಾಡಿ ಘಾಟ್ ಬಹಳ ಡೇಂಜರ್ ಸ್ಥಳವಂತೆ.
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್!
ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಜಿಯೋಲಾಜಿಕಲ್ ಸರ್ವೇ ತಂಡ ಸಮೀಕ್ಷೆ ನಡೆಸಿದ್ದು, ವರದಿ ಸಿದ್ಧಪಡಿಸಿದೆ.
ಇದೀಗ ವರದಿಯನ್ನು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ಗೆ ವರದಿ ಸಲ್ಲಿಸಲಾಗಿದೆ. ಅನೇಕ ಆಘಾತಕಾರಿ ಅಂಶಗಳು ವರದಿಯಲ್ಲಿ ಉಲ್ಲೇಖವಾಗಿರುವುದು ತಿಳಿದುಬಂದಿದೆ.
ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲು, ಚಾರ್ಮಾಡಿ ಘಾಟಿ ಬಹಳ ಅಪಾಯಕಾರಿ ಪ್ರದೇಶಗಳಾಗಿ ಪರಿಣಮಿಸಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಷ್ಟೇ ಅಲ್ಲದೆ, ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿಯಲ್ಲಿ ಮಾಹಿತಿ ನೀಡಲಾಗಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 88 ಅತ್ಯಂತ ಅಪಾಯಕಾರಿ ಸ್ಥಳಗಳಿವೆ ಎಂದು ಉಲ್ಲೇಖಿಸಿರುವ ವರದಿ, ಆ ಸ್ಥಳಗಳ ಹೆಸರು ಉಲ್ಲೇಖಿಸಿದೆ.
ಅವೈಜ್ಞಾನಿಕ ಕಾಮಗಾರಿಗಳಿಂದ ಗುಡ್ಡ, ಭೂ ಕುಸಿತ ಸಂಭವಿಸುತ್ತಿದ್ದು, ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿ ಮಾಡದೆ ಅವಾಂತರ ಸೃಷ್ಟಿಯಾಗಿದೆ ಎಂದು ವರದಿ ಹೇಳಿದೆ. ಅತಿಹೆಚ್ಚು ಕಾಮಗಾರಿಗಳಿಂದ ಪಶ್ಚಿಮ ಘಟ್ಟಗಳ ಸಾಲಿಗೆ ಹಾನಿಯಾಗುತ್ತಿದೆ ಎಂದು ಹೇಳಿದೆ.