ನಾಗಪುರ: ನಮ್ಮ ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಘಟನೆ ಭಾರತದ ಹಿಂದೂಗಳಿಗೂ ಒಂದು ಪಾಠ. ನಾವು ದುರ್ಬಲರಾಗಿದ್ದರೆ ನಮ್ಮ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ. ಅದಕ್ಕಾಗಿ ನಾವು ಎಲ್ಲಿದ್ದರೂ ಒಗ್ಗಟ್ಟಾಗಿ ಮತ್ತು ಸಬಲರಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಚಾಲಕ ಮೋಹನ್ ಭಾಗವತ್ ಹೇಳಿದರು.
ವಿಜಯದಶಮಿ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಸ್ವಯಂ ಸೇವಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲಿಯವರೆಗೂ ಬಾಂಗ್ಲಾದಲ್ಲಿ ಮೂಲಭೂತವಾದಿ ಸ್ವಭಾವ ಇರುತ್ತದೆಯೋ ಅಲ್ಲಿಯವರೆಗೆ ಹಿಂದೂಗಳ ಸಹಿತ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳ ತಲೆಯ ಮೇಲೆ ಅಪಾಯದ ತೂಗುಗತ್ತಿ ನೇತಾಡುತ್ತಲೇ ಇರುತ್ತದೆ ಎಂದು ತಿಳಿಸಿದರು.
ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..!
ವಿಶ್ವದಲ್ಲಿ ಭಾರತಕ್ಕೆ ಪ್ರಾಮುಖ್ಯತೆ ಸಿಗುತ್ತಿರುವುದರಿಂದ ಯಾರ ಸ್ವಾರ್ಥ ಹೊಡೆದುರುಳುತ್ತದೆಯೋ ಅಂತಹ ಶಕ್ತಿಗಳು ಭಾರತ ಒಂದು ಚೌಕಟ್ಟಿನೊಳಗೆ ಬೆಳೆಯುವಂತೆ ಮಾಡಲು ನಿರೀಕ್ಷೆಯಂತೆಯೇ ಶ್ರಮಿಸುತ್ತಿದೆ. ಇನ್ನೊಂದು ದೇಶದ ಮೇಲೆ ಆಕ್ರಮಣ ಮಾಡುವುದರಲ್ಲಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಚುನಾಯಿತ ಅಲ್ಲಿನ ಸರ್ಕಾರಗಳನ್ನು ಹಿಂಸಾತ್ಮಕ ಮಾರ್ಗದ ಮೂಲಕ ಕೆಳಗಿಳಿಸುವುದಕ್ಕೂ ಆ ಶಕ್ತಿಗಳು ಹಿಂದೇಟು ಹಾಕುವುದಿಲ್ಲ ಎಂದು ತಿಳಿಸಿದರು.