ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 (2019 ರ 34) ಸೆಕ್ಷನ್ 73 ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ಓದಲಾಗಿದೆ.
31ನೇ ಅಕ್ಟೋಬರ್ 2019ರ ಆದೇಶವು ಜಮ್ಮು ಮತ್ತು ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಕಾಶ್ಮೀರದ ಮೇಲೆ ರಾಷ್ಟ್ರಪತಿ ಆಳ್ವಿಕೆ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಂದು ಚಮಚ ಜೇನುತುಪ್ಪ ಸೇವಿಸಿದರೆ ಸಿಗುತ್ತೆ ಹಲವು ಆರೋಗ್ಯಕರ ಲಾಭಗಳು..!
ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಎನ್ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕರಿಸಲು ಸಕಲ ತಯಾರಿ ನಡೆಸಿದ್ದಾರೆ. ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ 2019ರ ಅ.31ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಯಿತು.
ನಂತರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲಾಯಿತು. 2019ರ ಅ.31ಕ್ಕೂ ಮುನ್ನ ಬಿಜೆಪಿಯು ಪಿಡಿಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿತ್ತು. ಬಳಿಕ ಅಂದಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ 2017ರ ರಿಂದ ಕೇಂದ್ರ ಆಡಳಿತವು ಮುಂದುವರಿದಿತ್ತು.