ಬೆಂಗಳೂರು: ವಾಯುಭಾರ ಕುಸಿತ ಸಾಧ್ಯತೆ ಇರುವುದರಿಂದ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಅ.17 ರವರೆಗೆ ಭಾರೀ ಮಳೆ ಆಗಲಿದೆ ಈ ಹಿನ್ನಲೆ ಈ ಜಿಲ್ಲೆಗಳಿಗೆ ಅಕ್ಟೋಬರ್ 17ರ ವರೆಗೆ ಯಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 17ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎರ್ಡ್ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ ಪ್ರದೇಶದಲ್ಲೂ ವಾಯುಭಾರ ಕುಸಿತ ಸಾಧ್ಯತೆ ಇದೆ. ಪರಿಣಾಮ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 17ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ. ಈ ಜಿಲ್ಲೆಗಳ ಹಲವೆಡೆ ಅಕ್ಟೋಬರ್ 17ರ ವರೆಗೆ ಭಾರಿಯಿಂದ ಅತೀ ಭಾರಿ ಮಳೆ ಸಾಧ್ಯತೆ ಇದೆ. ಈ ಹಿನ್ನಲೆ ಈ ಜಿಲ್ಲೆಗಳಿಗೆ ಅಕ್ಟೋಬರ್ 17ರ ವರೆಗೆ ಯಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 17ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ