ಬೆಂಗಳೂರು: ನಟ ದರ್ಶನ್ (Darshn) ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು (Bail) ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.
ಎರಡೂ ಕಡೆಯವರ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.10 ರಂದು ವಿಚಾರಣೆ ಪೂರ್ಣಗೊಳಿಸಿ ಅ. 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ರೇಣುಕಾಸ್ವಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್ ಬಳ್ಳಾರಿ (Ballari) ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.