ಉಡುಪಿ:- ಬ್ರಹ್ಮಾವರ ತಾಲೂಕಿನ ರಂಗನಕೆರೆ ಮದರಸ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣಾಗಿರುವಂತಹ ಘಟನೆ ಜರುಗಿದೆ.
ಕೋಲಾರ ವ್ಯಾಯಾಮ ಶಾಲೆ ವತಿಯಿಂದ ದೇಹದಾರ್ಡ್ಯ ಸ್ಪರ್ಧೆ: ಹೃತ್ವಿಕ್ ಚಾಂಪಿಯನ್!
12 ವರ್ಷದ ಮಹಮ್ಮದ್ ಜಹೀದ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎನ್ನಲಾಗಿದೆ. ಸದ್ಯ ಮಗನ ಸಾವಿನ ಕುರಿತು ತಾಯಿ ರಿಹಾನ ಬೇಗಂ ಸಂಶಯ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಮೃತ ಮಹಮ್ಮದ್ ಜಹೀದ್ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ. ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್ ಮರಳಿದ್ದ. ರಾತ್ರಿ ವೇಳೆ ಮದರಸ ಹಾಸ್ಟೆಲ್ ಬಾತ್ರೂಮಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.