ಕೋಲಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಲವರು ಒತ್ತಾಯಿಸುತ್ತಿರುವುದು ಖಂಡನೀಯ ಎಂದು ರಾಜ್ಯ ಕಾರ್ಯದರ್ಶಿ ಎಂ.ಎಸ್.ನಾರಾಯಣಸ್ವಾಮಿಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕರಾದ ಲಕ್ಷ್ಮೀನಾರಾಯಣ ಅವರುನ್ನು ಕಾಂಗ್ರೆಸ್ ಪಕ್ಷದವರಲ್ಲದಿರುವವರು ಅವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಲೂರು ಪುರಸಭೆ ಅಧ್ಯಕ್ಷರಾಗಿ, ನಿಗಮ ಮಂಡಳಿಗಳ ಅಧ್ಯಕ್ಷರಾಗಿ ಹಲವಾರು ಜನಸೇವೆ ಮಾಡಿದ್ದನ್ನು ಕಂಡು, ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ್ದಾರೆ. ಆದರೆ, ಕೆಲವರು ಸ್ವಾರ್ಥಕ್ಕಾಗಿ ಅವರ ತೇಜೋವದೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ರಕ್ಷಣಾ ಸಮಿತಿ ರಾಜ್ಯ ಕಾರ್ಯಧ್ಯಕ್ಷ ಕಲ್ಕೆರೆ ವಿಜಯಕುಮಾರ್, ಮುಖಂಡರಾದ ಎನ್.ಕೆ.ವೆಂಕಟೇಶ್, ಆಸಿಫ್, ಚಂದ್ರಪ್ಪ, ಮುನಿರಾಜು, ರೇಣುಕಾ, ಅಥಾವುಲ್ಲಾ ಹಾಜರಿದ್ದರು.