ವಿಜಯಪುರ:-ನವೆಂಬರ್ 6 ಯತ್ನಾಳ್ ಸಿಡಿ ಬಿಡುಗಡೆ ಗ್ಯಾರಂಟಿ ಎಂದು ಮುಸ್ಲಿಂ ಮುಖಂಡರು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಶಾಸಕನ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದಾರೆ.
ಮಂಡ್ಯದಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ: ಡಾ ಕುಮಾರ್!
ಹಠಾವೋ ದೇಶ ಬಚಾವೋ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿರುವ ಹಿನ್ನೆಲೆ,
ಮುಸ್ಲಿಂ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ. ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಾಳೆ ವಿಜಯಪುರದಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಆಂದೋಲನ ಪ್ರತಿಭಟನೆಗೆ ಕರೆ ನೀಡಿರುವ ಶಾಸಕ ಯತ್ನಾಳ್ ವಿರುದ್ಧ ಮುಸ್ಲಿಮರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ವಿಜಯಪುರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಸ್ಲಿಂ ಮುಖಂಡರಾದ ಎಸ್ ಎಸ್ ಖಾದ್ರಿ ಸೇರಿದಂತೆ ಹಲವರು ಮಾತನಾಡಿ ಯತ್ನಾಳ್ಗೆ ಸಿಡಿ ಎಚ್ಚರಿಕೆ ಕೊಟ್ಟಿದ್ದಾರೆ.
ಈ ವೇಳೆ ಮಾತನಾಡಿದ ಎಸ್ ಎಸ್ ಖಾದ್ರಿ, ತಿ…… ಮುಚ್ಚಿಕೊಂಡು ರಾಜಕಾರಣ ಮಾಡಬೇಕು. ಇಲ್ಲದಿದ್ದರೆ ನವೆಂಬರ್ 06ರಂದು ಸಿಡಿ ಬಿಡುಗಡೆ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಧ್ವನಿಗೂಡಿಸಿದ ಮಾಜಿ ಕಾರ್ಪೊರೇಟರ್ ಅಬ್ದುಲ್ ರಜಾಕ್ ಹೊರ್ತಿ, ನಾನೇನು ಬ್ಲಾಕ್ಮೇಲ್ ಮಾಡುತ್ತಿಲ್ಲ. ಕೋರ್ಟ್ ನಿಂದ ತಮ್ಮ ವಿರುದ್ದ ಮಾನಹಾನಿ ವರದಿ ಪ್ರಸಾರ ಮಾಡದಂತೆ ತಡಯಾಜ್ಞೆ ತಂದಿದ್ದರ ಕುರಿತು ಯತ್ನಾಳಗೆ ಪ್ರಶ್ನಿಸಿ. ತಡೆಯಾಜ್ಞೆ ಯಾವುದಕ್ಕೆ ತಂದಿದ್ದಾರೆ ಎಂಬುದು ಯತ್ನಾಳ್ ಅವರಿಗೆ ಗೊತ್ತು ಎಂದು ವ್ಯಂಗ್ಯವಾಡಿದರು.