ಬೆಂಗಳೂರು:- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ದಿಢೀರ್ Z ಶ್ರೇಣಿಯ ಭದ್ರತೆ ಒದಗಿಸಲಾಗಿದೆ.
ನವೆಂಬರ್ 6 ಯತ್ನಾಳ್ ಸಿಡಿ ಬಿಡುಗಡೆ ಗ್ಯಾರಂಟಿ: ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಮುಸ್ಲಿಂ ಮುಖಂಡರು!
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಷ್ಟ್ರದಾದ್ಯಂತ ಸುದ್ದಿಯಲ್ಲಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ ‘Z’ ಕೆಟಗರಿ ಭದ್ರತೆ ಒದಗಿಸಿದೆ
ಪ್ರಾಸಿಕ್ಯೂಷನ್ ಅನುಮತಿ ಬಳಿಕ ಇಲಾಖೆಯ ಸಲಹೆ ಮೇರೆಗೆ ಥಾವರ್ ಚಂದ್ ಗೆಹ್ಲೋಟ್ ಅವರು ಬುಲೆಟ್ ಪ್ರೂಫ್ ಕಾರು ಪಡೆದಿದ್ದರು. ಇದೀಗ ಕೇಂದ್ರ ಸರ್ಕಾರವೇ ಗೆಹ್ಲೋಟ್ ಅವರಿಗೆ ‘Z’ ಕೆಟಗರಿ ಭದ್ರತೆ ನೀಡಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಲಿಖಿತ ಆದೇಶ ಹೊರಡಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ ಈ ಆದೇಶ ಹೊರಡಿಸಿದೆ.