ರಾಯಚೂರು:- ಕಾರು-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ಜರುಗಿದೆ.
ಕಲಘಟಗಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಕರೆ!
ಮೃತರನ್ನು ಯಾಸಿನ್, ಮಕ್ಬಲ್, ಹರ್ಷದ್ ಎಂದು ಗುರುತಿಸಲಾಗಿದೆ. ಕಾರು ಮಾನ್ವಿಯಿಂದ ರಾಯಚೂರು ಕಡೆ ಹೊರಟಿತ್ತು. ಲಾರಿ ರಾಯಚೂರಿನಿಂದ ಮಾನ್ವಿ ಕಡೆ ಹೊರಟಿದ್ದ ಸಂದರ್ಭ ಭೀಕರ ಅಪಘಾತ ಸಂಭವಿಸಿದೆ. ಇತ್ತೀಚೆಗೆ ಶಾಲಾ ವಾಹನ ಹಾಗೂ ಸರ್ಕಾರಿ ಬಸ್ ನಡುವೆ ಅಪಘಾತವಾಗಿದ್ದ ರಸ್ತೆ ಮಾರ್ಗದಲ್ಲೇ ಘಟನೆ ನಡೆದಿದೆ.
ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.