ಧಾರವಾಡ: ಮಾಜಿ ಸಚಿವ ಹಾಗೂ ಶಾಸಕ ವಿನಯ ಕುಲಕರ್ಣಿ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ನಾಯಕರು ಯಾವುದೇ ಆಧಾರವಿಲ್ಲದೇ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.
ರೇಪ್ ಕೇಸ್: ವಿನಯ್ ಕುಲಕರ್ಣಿ ಮೇಲೆ ದೂರು ನೀಡಿದ್ದ ಸಂತ್ರಸ್ತೆ ವಿರುದ್ಧವೇ ದೂರು!
ರಾಜ್ಯ ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಅಮೃತ ದೇಸಾಯಿ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ಕೆಲಸ ಮಾಡಬಾರದು ಎಂದು ಧಾರವಾಡ ಗ್ರಾಮೀಣ- 71 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿನಯ ಕುಲಕರ್ಣಿ ಅಭಿಮಾನಿ ಬಳಗದ ಮುಖಂಡ ಅರವಿಂದ ಏಗನಗೌಡರ ತೀಕ್ಷ್ಣವಾಗಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದರು, ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರ ಕೇಸ್ ಕೊನೆಯ ಹಂತದಲ್ಲಿ ಇದೆ. ಈ ಸಂದರ್ಭದಲ್ಲಿ ಕೆಲವರು ಮತ್ತೊಂದು ಪ್ರಕರಣದಲ್ಲಿ ಸಿಲುಕಿಸುವ ಕೆಲಸ ಮಾಡುತ್ತಿದ್ದಾರೆ. 2022ರಲ್ಲಿ ಆಗಿರುವ ಪ್ರಕರಣವನ್ನು ಮುಂದಿಟ್ಟುಕೊ೦ಡು ಮಾನಸಿಕ ಹಿಂಸೆ ನೀಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ.
ಅವರ ಕುಟುಂಬವನ್ನು ವಿಚಲಿತ ಮಾಡಲು ಈ ರೀತಿ ಮಾಡಲಾಗುತ್ತಿದೆ ಎಂದರು. ಹಾವೇರಿ ಜಿಲ್ಲೆಯ ಮಹಿಳೆಯ ಆರೋಪದ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ. ಪ್ರಕರಣವನ್ನು ಸಿಬಿಐಗೆ ಕೊಡಬೇಕು ಎಂದು ಅರವಿಂದ ಬೆಲ್ಲದ ಹಾಗೂ ಅಮೃತ ದೇಸಾಯಿ ಆಗ್ರಹಿಸಿದ್ದಾರೆ.
ಅವರಿಬ್ಬರೂ ಮೊದಲು ನಮ್ಮ ನೆಲದ ಕಾನೂನಿನ ಬಗ್ಗೆ ತಿಳಿವಳಿಕೆ ಹೊಂದಲಿ. ಜನಪ್ರತಿನಿಧಿಯೊಬ್ಬರು ಕಾರ್ಯಕರ್ತರೊಂದಿಗೆ ವಿಡಿಯೋ ಕಾಲ್ ಮಾಡುವುದು ಸಾಮಾನ್ಯ. ಅದನ್ನೇ ಬಳಸಿಕೊಂಡು ಬ್ಲಾಕ್ ಮೇಲ್ ಮಾಡುವ ಕೆಲಸ ನಡೆಯುತ್ತಿದೆ ಎಂದರು.