ಸುದೀಪ್ ಬಿಗ್ ಬಾಸ್ ತೊರೆಯಲು ರೂಪೇಶ್ ರಾಜಣ್ಣ ಕಾರಣ ರಿವೀಲ್ ಮಾಡಿದ್ದಾರೆ.
ದರ್ಶನ್ ಜಾಮೀನು ಅರ್ಜಿ ವಜಾ: ಈಗ ದಾಸನ ಮುಂದಿರೋದು ಮೂರೇ ಮೂರು ಪ್ರಮುಖ ಆಯ್ಕೆಗಳು
ಈ ಮೊದಲು ‘ಬಿಗ್ ಬಾಸ್’ನಲ್ಲಿ ಯಾರಾದರೂ ಇಂಗ್ಲಿಷ್ ಮಾತನಾಡಿದರೆ ಅದನ್ನು ಬಿಗ್ ಬಾಸ್ ಸಹಿಸುತ್ತಿರಲಿಲ್ಲ. ಆಗ ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡನ್ನು ಹಾಕುತ್ತಿದ್ದರು. ಆದರೆ, ಈಗ ಈ ಪದ್ಧತಿ ಅಳಿದು ಹೋಗಿದೆ. ಇದಕ್ಕೆ ಬಿಗ್ ಬಾಸ್ ಆಯೋಜಕರೇ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನು ಸುದೀಪ್ ಖಂಡಿಸಿದ್ದಾರೆ. ‘ಹೆಚ್ಚು ಇಂಗ್ಲಿಷ್ ಬಳಕೆ ಮಾಡಿದಾಗ ಅದನ್ನು ಪ್ರಶ್ನೆ ಮಾಡಿ’ ಎಂದು ಸುದೀಪ್ ಕೋರಿದ್ದರು. ಆದರೆ, ಇದಕ್ಕೆ ಆಯೋಜಕರು ಒಪ್ಪಿಲ್ಲ.
ಈ ಮೊದಲು ಸ್ವರ್ಗ ಹಾಗೂ ನರಕದ ಕಾನ್ಸೆಪ್ಟ್ ಇತ್ತು. ಸ್ವರ್ಗದ ಮಂದಿ ಹಾಯಾಗಿ ಕುಳಿತಿದ್ದರೆ ನರಕದವರು ನಿಂತೇ ಇದ್ದರು. ಹೀಗಾಗಿ, ಅವರಿಗೆ ಕೂರೂಕೆ ಅವಕಾಶ ಕೊಡಿ ಎಂದು ಸುದೀಪ್ ಕೋರಿದ್ದರು. ಆದರೆ, ಇದಕ್ಕೆ ಆಯೋಜಕರು ಸೊಪ್ಪು ಹಾಕಿಲ್ಲ ಎನ್ನಲಾಗಿದೆ. ಇದು ಸುದೀಪ್ ಕೋಪಕ್ಕೆ ಕಾರಣ ಆಗಿದೆ. ಅಲ್ಲದೆ, ನರಕವಾಸಿಗಳಿಗೆ ಟಾಯ್ಲೆಟ್ ಬಳಕೆಗೆ ಯಾವುದೇ ಷರತ್ತುಗಳನ್ನು ಹಾಕದಂತೆಯೂ ಕೋರಿದ್ದರು.
ಎ23 ರಮ್ಮಿ’ ಆ್ಯಪ್ ಕೂಡ ‘ಬಿಗ್ ಬಾಸ್’ನ ಸ್ಪಾನ್ಸರ್ಗಳಲ್ಲಿ ಒಂದಾಗಿದೆ. ಈ ಹೆಸರನ್ನು ತೆಗೆದುಕೊಳ್ಳೋಕೆ ಇರಿಸುಮುರುಸಾಗುತ್ತಿದೆ ಎಂದು ಸುದೀಪ್ ಹೇಳಿದ್ದರು. ಇದನ್ನು ಸ್ವಲ್ಪ ಅವಾಯ್ಡ್ ಮಾಡಿ ಎಂದು ಸುದೀಪ್ ಕೋರಿದ್ದರು. ಆದರೆ, ಆಯೋಜಕರು ಒಪ್ಪಿಲ್ಲ. ಹೀಗಾಗಿ ಬಿಗ್ ಬಾಸ್ ತೊರೆದಿದ್ದಾರೆ ಎನ್ನಲಾಗಿದೆ.