ಬೆಂಗಳೂರು:- ರಾಜಧಾನಿ ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆಯೇ ಮಳೆ ಎಂಟ್ರಿ ಕೊಟ್ಟಿದ್ದಾನೆ. ಐದು ಗಂಟೆಯಿಂದಲೂ ನಗರದಲ್ಲಿ ಮಳೆ ಸುರಿಯುತ್ತಿದೆ.
ಕೆಲಸ- ಕಾಲೇಜಿಗೆ ಹೋಗೋರಿಗೆ ಮಳೆರಾಯ ಕಾಡುತ್ತಿದೆ. ಅಗ್ನೇಯ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ಕೊಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ,ಚಿಕ್ಕಬಳ್ಳಾಪುರ, ರಾಮನಗರ,ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಹೀಗಾಗಿ ಮೇಲಿನ ಜಿಲ್ಲೆಗಳಿಗೆ ಇಂದು ನಾಳೆ ಯೆಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಕೊಡಲಾಗಿದೆ.