ಹುಬ್ಬಳ್ಳಿ: ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಸಿದ್ಧವಾಗಿದೆ ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಭಯೋತ್ಪಾದಕರು ಬೇರೆಡೆ ಇದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಆಡುವ ಮಾತುಗಳು ಯಾಕೆ ಕೆಳಮಟ್ಟಕ್ಕೆ ಹೋಗಿದೆ ಗೊತ್ತಾಗುತ್ತಿಲ್ಲ ಎಂದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಮೋದಿಯವರು ಭಯೋತ್ಪಾದಕರನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ ಎಂದರು. ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಠಿಣ ಕಾನೂನುಗಳನ್ನು ಹಾಕಲಾಗಿತ್ತು.
ಭಾರತೀಯ ಆಹಾರ ನಿಗಮದಲ್ಲಿದೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹ 71,000 ಸಂಬಳ – ಇಂದೇ ಅರ್ಜಿ ಸಲ್ಲಿಸಿ
ಕಡಿಮೆ ಸಮಯದಲ್ಲಿ ಸಾವಿರಾರು ಜನ ಸೇರಿ ಗಲಭೆ ಮಾಡಿದ್ದರು. ಅಂದಿನ ಹು-ಧಾ. ಪೊಲೀಸ್ ಆಯುಕ್ತ ಲಾಭೂ ರಾಮ್ ಅವರು ಸ್ಥಳಕ್ಕೆ ದೌಡಾಯಿಸಿ ನಿಯಂತ್ರಣ ಮಾಡಿ, ಅನಾಹುತ ತಪ್ಪಿಸಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಗಲಭೆ ಪ್ರಕರಣ ವಾಪಸ್ಸು ಪಡೆದು ಸಂವಿಧಾನಕ್ಕೆ ಅಗೌರವ ತೋರುತ್ತಿದೆ. ಮತಬ್ಯಾಂಕ್ಗೆ ಸಮಾಜದ ವ್ಯವಸ್ಥೆ ಹಾಳು ಮಾಡುತ್ತಿದೆ ಎಂದು ಹರಿಹಾಯ್ದರು.