ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ (ಇಸಿ) ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ.
2019 ರಲ್ಲಿ ಶಿವಸೇನೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷವು (ಎನ್ಸಿಪಿ) ಕಾಂಗ್ರೆಸ್ ಜೊತೆ ಸೇರಿಕೊಂಡು ಸರ್ಕಾರ ರಚಿಸಿದ್ದವು. ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ 288ರ ಪೈಕಿ 154 ಸ್ಥಾನಗಳನ್ನು ಗೆದ್ದಿತ್ತು. ನಂತರ ಶಿವಸೇನೆ ಮತ್ತು ಎನ್ಸಿಪಿಯಲ್ಲಿ ಒಡಕುಂಟಾಗಿ, ಶಿಂಧೆ ಬಣ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತು. ಈ ಬಾರಿಯ ಚುನಾವಣೆ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ.
ಭಾರತೀಯ ಆಹಾರ ನಿಗಮದಲ್ಲಿದೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹ 71,000 ಸಂಬಳ – ಇಂದೇ ಅರ್ಜಿ ಸಲ್ಲಿಸಿ
ರಾಜ್ಯದ 288 ಸ್ಥಾನಗಳಲ್ಲಿ 158 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಏಕನಾಥ್ ಶಿಂಧೆ ಅವರ ಶಿವಸೇನೆಗೆ 70 ಮತ್ತು ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ 50 ಸೀಟುಗಳನ್ನು ಅದು ನೀಡಿದೆ. ಹರಿಯಾಣದ ಸೋಲಿನಿಂದ ಜರ್ಜರಿತವಾಗಿರುವ ಕಾಂಗ್ರೆಸ್, ಬಿಜೆಪಿಯನ್ನು ಎದುರಿಸಲಿದೆ. ಮಹಾರಾಷ್ಟ್ರದ ಚುನಾವಣಾ ಕಾಲದಲ್ಲಿ ಗಮನಹರಿಸಬೇಕಾದ ಪ್ರಮುಖ ವ್ಯಕ್ತಿಗಳ ಪೈಕಿ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಪಾಟೀಲ್ ಅವರು ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ಸರಣಿ ಉಪವಾಸ ಸತ್ಯಾಗ್ರಹಗಳನ್ನು ನಡೆಸಿದ್ದಾರೆ.