ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಜೆ ಘೋಷಿಸಿದ್ದಾರೆ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಭಾರತೀಯ ಆಹಾರ ನಿಗಮದಲ್ಲಿದೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹ 71,000 ಸಂಬಳ – ಇಂದೇ ಅರ್ಜಿ ಸಲ್ಲಿಸಿ
ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಯನ್ನೂ ನೀಡಿದೆ. ಈ ಜಿಲ್ಲೆಗಳ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಅಕ್ಟೋಬರ್ 15 ರಿಂದ 18ರವರೆಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಸಲಹೆಯನ್ನು ನೀಡುವಂತೆ ಅಧಿಕಾರಿಗಳಿಗೆ ಸ್ಟಾಲಿನ್ ಸೂಚನೆ ನೀಡಿದ್ದಾರೆ.