ಚಿತ್ರನಟ ದರ್ಶನ್ ಜನ್ಮದಿನದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸದ ಪಕ್ಕದಲ್ಲಿ ಸೇರಿದ್ದ ದರ್ಶನ ಅಭಿಮಾನಿಗಳು ಸಿಡಿಸಿದ ಭಾರಿ ಸಿಡಿಮದ್ದಿನ ಸದ್ದಿನಿಂದ ನಾನು ನನ್ನ ಶ್ರವಣ ಶಕ್ತಿಯನ್ನು ಕಳೆದುಕೊಳ್ಳಬೇಕಾಯಿತು ಎಂದು ಹಿರಿಯ ಸಾಹಿತಿ ನಾಡೋಜ ಡಾ. ಗೊ.ರು. ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಗದಗ ನಗರದ ತೋಂಟದಾರ್ಯ ಮಠದ ಶಿವಾನುಭವ ಮಂಟಪದಲ್ಲಿ ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ,
Hidden Camera: ಮಾಲ್-ಹೋಟೆಲ್ʼಗಳಲ್ಲಿ ಇರೋ ಹಿಡನ್ ಕ್ಯಾಮೆರಾಗಳನ್ನು ಪತ್ತೆ ಮಾಡೋದು ಹೇಗೆ…?
ಮರಣವೇ ಮಹಾನವಮಿ ಆಚರಣೆ ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದ ಅವರು ತಮ್ಮ ಶ್ರವಣ ಶಕ್ತಿ ಕಳೆದುಕೊಂಡ ಬಗ್ಗೆ ಅಸಮಾಧಾನ ಹೊರಹಾಕಿದರು. 97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡಬಲ್ಲೆ, ನಡೆದಾಡಬಲ್ಲೆನು. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ ಎಂದರು.