ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಅ.16ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.
BREAKING: ನವೆಂಬರ್ 13ಕ್ಕೆ ರಾಜ್ಯದ ಮೂರು ಕ್ಷೇತ್ರಗಳಿಗೆ ಬೈ ಎಲೆಕ್ಷನ್: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ
ಮಳೆ ಅಬ್ಬರದ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ (DC Jagadeesh) ರಜೆ ಘೋಷಿಸಿದ್ದು, ಅಂಗನವಾಡಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದ್ದು, ಪ್ರಾಥಮಿಕ, ಪ್ರೌಢಶಾಲಾ ಬಿಟ್ಟು ಉಳಿದ ತರಗತಿಗಳು ಎಂದಿನಂತೆ ನಡೆಯಲಿವೆ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಐಐಟಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.