ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತ ಲೋಕಾರ್ಪಣೆ ಕಾರ್ಯಕ್ರಮವನ್ನು ನಾಳೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. 4,336 ಕೋಟಿ ರೂ ವೆಚ್ಚದ ಸದರಿ ಯೋಜನೆಯ ಮೂಲಕ 4 ಲಕ್ಷ ಸಂಪರ್ಕ ಕಲ್ಪಿಸಲಾಗುತ್ತಿದ್ದು,
Alcohol: ವಿಸ್ಕಿ ಮತ್ತು ಬಿಯರ್ ಒಟ್ಟಿಗೆ ಸೇರಿಸಿ ಕುಡಿದ್ರೆ ಏನಾಗುತ್ತದೆ ಗೊತ್ತಾ..? ಈ ಸ್ಟೋರಿ ನೋಡಿ
50 ಲಕ್ಷ ಫಲಾನುಭವಿಗಳಿಗೆ ನೀರು ಒದಗಿಸಲಾಗುತ್ತದೆ. 775 ಎಂ.ಎಲ್.ಡಿ ಹೆಚ್ಚುವರಿ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಉದ್ಘಾಟನೆ ಕಾರ್ಯಕ್ರಮವು ನಾಳೆ ಬೆಳಗ್ಗೆ 10.30ಕ್ಕೆ ಆರಂಭಗೊಳ್ಳಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಈ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಂದು ಸುಮಾರು 10 ಸಾವಿರ ಜನರನ್ನು ಸೇರಿಸುವ ಗುರಿಯನ್ನು ಸಹ ಹಾಕಿಕೊಳ್ಳಲಾಗಿದೆ.