ಬೆಂಗಳೂರು:- ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ. ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದರು.
ಉಪಚುನಾವಣೆ ಘೋಷಣೆಯಾಗಿದ್ದು, ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು ಎಂದು ಹೇಳಿದರು.