ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಸಾಕಷ್ಟು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿ ಹೋಗಿದ್ದಾರೆ. ರಸ್ತೆಗಳೆಲ್ಲಾ ಮಳೆ ನೀರು ತುಂಬಿ ಹರಿಯುತ್ತಿದ್ದು, ಸವಾರರು ಪರದಾಟ ನಡೆಸಿದ್ದಾರೆ.
BBK11: ಬಿಗ್ ಬಾಸ್ ಶೋ ಬಗ್ಗೆ ಅಶ್ಲೀಲ ಪದ ಬಳಕೆ: ಜಗದೀಶ್ ವರ್ತನೆಗೆ ಉಗ್ರವತಾರ ತಾಳಿದ ಮನೆಮಂದಿ!
ಮಳೆಯ ಆರ್ಭಟ ಜೋರಾಗಿರುವ ಹಿನ್ನೆಲೆ ನಗರದಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸಿಬ್ಬಂದಿಯನ್ನು ಮರು ನಿಯೋಜನೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸೂಚಿಸಿದ್ದು, ಈಗಾಗಲೇ 60 ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸಿಬ್ಬಂದಿಯನ್ನು ಬೆಂಗಳೂರಿಗೆ ಮರು ನಿಯೋಜಿಸಲಾಗಿದೆ.
ಹೆಚ್ಚುವರಿಯಾಗಿ 40 ಸಿಬ್ಬಂದಿ ತುಕಡಿಯನ್ನೂ ಇರಿಸಲಾಗಿದೆ. ಇನ್ನು ತಕ್ಷಣ ಪ್ರತಿಕ್ರಿಯೆಗೆ ಅಗ್ನಿಶಾಮಕ, ತುರ್ತು ಸೇವಾದಳ ನಿಯೋಜನೆ ಮಾಡಲಾಗಿದ್ದು, ಬೆಂಗಳೂರು ಜಿಲ್ಲಾಡಳಿತ ಈಗಾಗಲೇ ಶಾಲೆಗಳಿಗೆ ರಜೆ ಘೋಷಿಸಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ‘ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ 4 ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯವರು ತಿಳಿಸಿದ್ದಾರೆ. ಈಗಾಗಲೇ ನಾವು ಎಚ್ಚರಿಕೆ ವಹಿಸಿದ್ದೇನೆ. 24 ಗಂಟೆ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದ್ದೇನೆ. ಟ್ರಾಫಿಕ್, ಮಳೆ ಹೆಚ್ಚಾಗುವ ಕಾರಣ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದರು.