ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಕೂಡ ಮಳೆ ಆರ್ಭಟ ಮುಂದುವರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ಇರಲ್ಲ!
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಇರುವುದಿಲ್ಲ.
ಮಂಗಳವಾರ ಮುಂಜಾನೆ ನಗರದಲ್ಲಿ ಆರಂಭವಾದ ಮಳೆ ಸಂಜೆಯ ತನಕ ಸುರಿದಿದೆ. ದಿನವಿಡೀ ಸುರಿದ ಮಳೆಯ ಕಾರಣ ಹಲವು ರಸ್ತೆಗಳು ಜಲಾವೃತಗೊಂಡಿತ್ತು. ಸಂಚಾರ ವ್ಯವಸ್ಥೆ ಮೇಲೆ ಮಳೆ ಪರಿಣಾಮ ಬೀರಿದ್ದು, ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಾನ್ಯತಾ ಟೆಕ್ ಪಾರ್ಕ್ ರಸ್ತೆ ಜಲಾವೃತವಾಗಿದ್ದು, ಬುಧವಾರ ಐಟಿ-ಬಿಟಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಬೇಕು ಎಂದು ಸಲಹೆ ನೀಡಲಾಗಿದೆ.