ಬೆಂಗಳೂರು: ಭಾರತದ ಪ್ರಮುಖ ಟೆಕ್ ಹಬ್ ಎನಿಸಿಕೊಂಡಿರುವ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಇಂದು ಸುರಿದ ಭಾರೀ ಮಳೆಯಿಂದಾಗಿ ಪ್ರವಾಹಪೀಡಿತ ಪ್ರದೇಶದಂತಾಗಿದೆ. 300 ಎಕರೆ ಪ್ರದೇಶದರಲ್ಲಿರುವ ಮಾನ್ಯತಾ ಟೆಕ್ ಪಾರ್ಕ್ ಸಂಪೂರ್ಣ ಜಲಾವೃತವಾಗಿದ್ದು, ಇದರ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಮಳೆಯಿಂದಾಗಿ 300 ಎಕರೆ ಪ್ರದೇಶದಲ್ಲಿರುವ ಬೆಂಗಳೂರಿನ ಐಟಿ ಹಬ್ ಮಾನ್ಯತಾ ಟೆಕ್ ಪಾರ್ಕ್ ಜಲಾವೃತಗೊಂಡಿರುವ ವಿಡಿಯೋ ವೈರಲ್ ಆಗಿದೆ. ಹೀಗಾಗಿ, ಸೋಷಿಯಲ್ ಮೀಡಿಯಾದಲ್ಲಿ ಮಾನ್ಯತಾ ಟೆಕ್ಪಾರ್ಕ್ ಟ್ರೆಂಡಿಂಗ್ನಲ್ಲಿದೆ. ಮಾನ್ಯತಾ ಟೆಕ್ ಪಾರ್ಕ್ಗೆ ಹೋಗುವ ರಸ್ತೆಗಳು ಜಲಾವೃತವಾಗಿವೆ.