ಬೆಂಗಳೂರು: ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ, ಜ್ಯೂಸ್ ಕುಡಿಸಿ ಮೊಬೈಲ್, ಪರ್ಸ್, ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳಿಯೊಬ್ಬಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಲತಾ ಬಂಧಿತ ಮಹಿಳೆ. ಬಿಎಂಟಿಸಿ ಬಸ್ನಲ್ಲಿ (BMTC Bus) ಒಂಟಿ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಕಳ್ಳಿ, ಪರಿಚಯ ಮಾಡಿಕೊಂಡು ಜ್ಯೂಸ್ ಕುಡಿಯಲು ಕರೆದುಕೊಂಡು ಹೋಗ್ತಿದ್ದಳು. ಜ್ಯೂಸ್ ಕುಡಿದು ಪ್ರಜ್ಞೆ ಕಳೆದುಕೊಂಡ ತಕ್ಷಣ ಮೊಬೈಲ್, ಪರ್ಸ್, ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದಳು.
ಈ ಬಗ್ಗೆ ಮಾಹಿತಿ ಪಡೆದ ಬ್ಯಾಟರಾಯನಪುರ ಪೊಲೀಸರು ಆಕೆಯನ್ನ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಠಾಣೆಗೆ ಕರೆತಂದ ಕೆಲವೇ ನಿಮಿಷಗಳಲ್ಲಿ ಹಿಳೆ ವಿಷಪೂರಿತ ಚಾಕೊಲೆಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಹಿಳೆ ಕುಸಿದುಬಿದ್ದ ನಂತರ ಪೊಲೀಸರು ಆಕೆಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ