ಬೆಂಗಳೂರು/ ದೆಹಲಿ : 174 ಪ್ರಯಾಣಿಕರೊಂದಿಗೆ ಪ್ರಯಾಣ ಬೆಳೆಸಿದ್ದ ದೆಹಲಿ-ಬೆಂಗಳೂರು ಆಕಾಶ ಏರ್ ವಿಮಾನಕ್ಕೆ ಬುಧವಾರ ಬಾಂಬ್ ಬೆದರಿಕೆ ಕಾಲ್ ಬಂದಿದೆ. ಹಾಗಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ಮರಳಿದೆ
ಅಕ್ಟೋಬರ್ 16, 2024 ರಂದು ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಇದರಲ್ಲಿ 174 ಪ್ರಯಾಣಿಕರು, 3 ಮಕ್ಕಳು ಮತ್ತು 7 ಸಿಬ್ಬಂದಿಯನ್ನು ಇದ್ದು, ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಿದೆ. ಆಕಾಶ ಏರ್ ಎಮರ್ಜೆನ್ಸಿ ರೆಸ್ಪಾನ್ಸ್ ತಂಡಗಳು ಪರಿಸ್ಥಿತಿಯನ್ನು ಅವಲೋಕಿಸುತ್ತಿವೆ ಮತ್ತು ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ವಿಮಾನವನ್ನು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲು ಪೈಲಟ್ಗೆ ಸೂಚಿಸಿದ್ದಾರೆ.
ಮುಂಬೈನಿಂದ ಮೂರು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದ ಒಂದು ದಿನದ ನಂತರ ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ಮೂಲಕ ಬೆದರಿಕೆಗಳು ಬಂದಿದ್ದು, ನೂರಾರು ಪ್ರಯಾಣಿಕರು ಮತ್ತು ಏರ್ಲೈನ್ ಸಿಬ್ಬಂದಿಗೆ ತೊಂದರೆಯಾಗಿದೆ.