ಬೆಂಗಳೂರು:– ಕರ್ನಾಟಕದಲ್ಲಿ ಅಕ್ಟೋಬರ್ 23ರವರೆಗೂ ಭಾರೀ ಮಳೆಯ ಮುನ್ಸೂಚನೆ ಕೊಟ್ಟಿರುವ ಹವಮಾನ ಇಲಾಖೆಯು, ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಚಲಿಸುತ್ತಿದ್ದ ಕಿಟಕಿಯಿಂದ ಬಿದ್ದ ಮಗು: ಮಗಳಿಗಾಗಿ 16 ಕಿಮೀ ಓಡಿದ ತಂದೆ!
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ವಿಜಯಪುರ, ಬೀದರ್ನಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 22.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.