ಬೆಂಗಳೂರು:- ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ ಮಾಡಲಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸೋಮಣ್ಣ ಅವರು,ದೀಪಾವಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಜಾಸ್ತಿ ಇರಲಿರುವುದರಿಂದ ಅಕ್ಟೋಬರ್ 31 ರಿಂದ ನವೆಂಬರ್ 2 ವರೆಗೆ ರಾಜ್ಯದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ ಎಂದರು.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31 ರಿಂದ ನವೆಂಬರ್ 2 ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ.
ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಾದ ಬೆಳಗಾವಿಯಿಂದ ಮೀರಜ್, ಬೆಂಗಳೂರಿನಿಂದ ಬೆಳಗಾವಿ, ಮೈಸೂರಿನಿಂದ ವಿಜಯಪುರದವರೆಗೆ ಹಾಗೂ ವಿಸ್ತರಿತ ರೈಲ್ವೆ ಮಾರ್ಗ ಹುಬ್ಬಳ್ಳಿಯಿಂದ ರಾಮೇಶ್ವರಂ ಹಾಗೂ ಋಷಿಕೇಶದಿಂದ ಹುಬ್ಬಳ್ಳಿವರೆಗೆ ವಿಶೇಷ ರೈಲುಗಳು ಸಂಚರಿಸಲಿವೆ.