ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ವಿಧಿವಶರಾಗಿದ್ದಾರೆ.
42 ವರ್ಷದ ದೀಪಕ್, ಇಂದು ಸಂಜೆ 7 ಗಂಟೆ ಸುಮಾರಿಗೆ ಅವರು ಕೊನೆಯುಸಿರು ಎಳೆದಿದ್ದಾರೆ. ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಅದಕ್ಕೆ ಅವರು ಡಯಾಲಿಸಿಸ್ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ.
ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.