ಬೆಂಗಳೂರು:- ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಫ್ರೀ ಟ್ಯೂಷನ್ ಕೊಡಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ.
ಬೆಂಗಳೂರಿಗರ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್; ಎಲ್ಲೆಲ್ಲಿ ಗೊತ್ತಾ!?
ಇಷ್ಟು ದಿನ ಪೋಷಕರು ಸಾವಿರಾರು ರೂಪಾಯಿ ಹಣ ಖರ್ಚುಮಾಡಿ ತಮ್ಮ ಮಕ್ಕಳನ್ನು ಖಾಸಗಿ ಟ್ಯೂಷನ್ ಸೆಂಟರ್ ಗಳಿಗೆ ಸೇರಿಸುತ್ತಿದ್ದರು. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ
ಮುಂಜಾನೆ ಹಾಗೂ ಸಂಜೆ ಶಾಲೆಯ ಆರಂಭಕ್ಕೂ ಮೊದಲು ಒಂದು ಗಂಟೆ ಹಾಗೂ ಶಾಲೆ ಅವಧಿ ಮುಗದ ಬಳಿಕ ಒಂದು ಕ್ಲಾಸ್ ಶಿಕ್ಷಕರು ಮಕ್ಕಳಿಗೆ ವಿಶೇಷ ತರಗತಿ ತಗೆದುಕೊಳ್ಳುತ್ತಿದ್ದಾರೆ. 1 ರಿಂದ 12 ನೇ ತರಗತಿಯಲ್ಲಿನ ಮಕ್ಕಳಿಗೆ ಇದು ಆರಂಭವಾಗುತ್ತಿದೆ. ಯಾವ ತರಗತಿಯಲ್ಲಿ ಹಿನ್ನಡೆ ಇದ್ದಾರೆ ಎಂದು ಶಾಲಾ ಶಿಕ್ಷಕರೇ ಗುರುತಿಸಿ ಆ ವಿಷಯದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನ ಈ ಸ್ಪೆಷಲ್ ಕ್ಲಾಸ್ಗೆ ಕಳುಹಿಸುತ್ತಾರೆ.
ಒಟ್ಟಿನಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯದ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು ಸರ್ಕಾರಿ ಶಾಲಾ ಶಿಕ್ಷಕರನ್ನೇ ಬಳಕೆ ಮಾಡಿಕೊಂಡು ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ.