ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಚಿತಾ ಭಸ್ಮವನ್ನು (Ashes) ಅರಬ್ಬಿ ಸಮುದ್ರದಲ್ಲಿ (Arabian Sea) ವಿಸರ್ಜಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ (Breach Candy Hospital) ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ಅ.9 ರಂದು ಕೊನೆಯುಸಿರೆಳೆದರು. ಅ.10 ರಂದು ಅಂತಿಮ ವಿಧಿವಿಧಾನಗಳನ್ನು ಮುಂಬೈನ (Mumbai) ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು.
ಇದೀಗ ಅವರ ಆಸೆಯಂತೆ ಅವರ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸುವುದಾಗಿ ಟಾಟಾ ಕುಟುಂಬ ನಿರ್ಧಾರ ಕೈಗೊಂಡಿದೆ. ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ (Gate Way Of India) ಹಡಗಿನಲ್ಲಿ ಮೆರವಣಿಗೆಯ ಮೂಲಕ ಚಿತಾ ಭಸ್ಮವನ್ನು ವಿಸರ್ಜಿಸಲಾಗುವುದು. ಈ ಸಂದರ್ಭದಲ್ಲಿ ಅವರ ಕುಟುಂಬ, ಅವರ ಸ್ನೇಹಿತರು ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.