ಮೈಸೂರು: ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಮುಡಾ ಹಗರಣ ಸಂಬಂಧ ಇಡಿ ಸ್ನೇಹಮಯಿ ಕೃಷ್ಣ ಅವರಿಗೆ ಸಮ್ಸನ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಅದರಂತೆ ಸ್ನೇಹಮಯಿ ಕೃಷ್ಣ ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೇ ಹಗರಣ ಸಂಬಂಧ 500 ಪುಟಗಳ ದಾಖೆಯನ್ನು ಇಡಿಗೆ ನೀಡಿದ್ದರು.
ದಾಖಲೆಗಳ ಆಧಾರದ ಮೇಲೆ ಇಡಿ ಇಸಿಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ. ಇದೀಗ ಇಡಿ, ಮುಡಾ ಕಚೇರಿ ಮತ್ತು ಭೂ ಮಾಲೀಕ ದೇವರಾಜು ಮನೆ ಮೇಲೆ ದಾಳಿ ಮಾಡಿದೆ. ಹಗರಣದಲ್ಲಿ ದೇವರಾಜು ಎ4 ಆಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.