ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಸಂಚಾರಿ ನಿಯಮ ಪದೇ-ಪದೇ ಉಲ್ಲಂಘನೆ: ಈ ಭೂಪನಿಗೆ ಮೂರು ಮೀಟರ್ ಉದ್ದದ ರಶೀದಿ ಕೊಟ್ಟ ಪೊಲೀಸ್!
ಈ ಸಂಬಂಧ ಮಾತನಾಡಿದ ಅವರು,ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದರು.
ತನಿಖೆಯನ್ನು ಸಿಬಿಐಗೆ ಕೊಡದೇ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನವರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಎಲ್ಲ ಕಡತಗಳನ್ನು ಹೆಲಿಕಾಪ್ಟರ್ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಬೇಕು. ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು. ಮಾನ್ಯ ಸುರೇಶ್ ಅವರೂ ರಾಜೀನಾಮೆ ನೀಡಬೇಕು. ಇಲ್ಲವಾದರೆ ಇಡಿ. ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಬಂಧಿಸಲಿ ಎಂದು ಛಲವಾದಿ ಒತ್ತಾಯಿಸಿದರು.