ನವದೆಹಲಿ: ಕಜಾನ್ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪಾಲ್ಗೊಳ್ಳಲು ಪ್ರಧಾನಿ ಮೋದಿ ಮುಂದಿನ ವಾರ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ.
ಕಜಾನ್ನಲ್ಲಿ ಅ.22, 23 ರಂದು 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಬ್ರಿಕ್ಸ್ ಶೃಂಗಸಭೆಯು ರಷ್ಯಾದ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ.
ಭಾರತದಲ್ಲಿರುವ ಜರ್ಮನ್ ರಾಯಭಾರಿ: ಹೊಸ ಕಾರಿಗೆ ನಿಂಬೆಹಣ್ಣು, ಮೆಣಸಿನಕಾಯಿ ಕಟ್ಟಿ ಪೂಜೆ!
‘ಜಾಗತಿಕ ಅಭಿವೃದ್ಧಿ ಮತ್ತು ಭದ್ರತೆಗಾಗಿ ಬಹುಪಕ್ಷೀಯತೆಯನ್ನು ಬಲಪಡಿಸುವುದು’ ಎಂಬ ವಿಷಯದ ಶೃಂಗಸಭೆಯು ಪ್ರಮುಖ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಾಯಕರಿಗೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ ಎಂದು MEA ಹೇಳಿದೆ.
BRIC (ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾ) ರಾಷ್ಟ್ರಗಳ ನಾಯಕರು 2006 ರಲ್ಲಿ ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ನಲ್ಲಿ ಮೊದಲ ಬಾರಿಗೆ ಭೇಟಿಯಾದರು. ಉನ್ನತ ಮಟ್ಟದ ಸಭೆಗಳ ಸರಣಿಯ ನಂತರ, ಮೊದಲ BRIC ಶೃಂಗಸಭೆಯು ರಷ್ಯಾದ ಯೆಕಟೆರಿನ್ಬರ್ಗ್ನಲ್ಲಿ 2009 ರಲ್ಲಿ ನಡೆಯಿತು.