ಬೆಂಗಳೂರು: ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡಿದ್ದು ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಾಗಾಗಿ ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.
Isha Foundation: ಇಶಾ ಫೌಂಡೇಶನ್ ವಿರುದ್ಧದ ಕೇಸ್ ವಜಾ : ಸದ್ಗುರು ಜಗ್ಗಿ ವಾಸುದೇವ್ಗೆ ಬಿಗ್ ರಿಲೀಫ್
92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರೆದಿದೆ.
ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅವರು ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.