ಬೆಂಗಳೂರು:- ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.25 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರನ್ನು ಬಂಧಿಸಲಾಗಿದೆ.
ಗೋಪಾಲ್ ಜೋಶಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಿನ್ನೆಯೇ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವವರನ್ನು ಬಂಧಿಸಲಾಗಿದೆ.
ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ ಲಾಡ್ಜ್ನಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ 5.30ಕ್ಕೆ ಲಾಡ್ಜ್ಗೆ ತೆರಳಿ ಬಂಧಿಸಿರುವ ಪೊಲೀಸರು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದಾರೆ.
ಸುನೀತಾ ಚೌಹಾಣ್ ಎಂಬುವವರು ನೀಡಿದ ದೂರಿನ ಮೇರೆಗೆ ಗೋಪಾಲ್ ಜೋಶಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ವಿಚಾರಣೆ ಹಾಜರಾಗುವಂತೆ ಸೂಚನೆ ಹಿನ್ನಲೆ ಹುಬ್ಬಳ್ಳಿ ಕೇಶ್ವಾಪೂರ ಪೊಲೀಸ್ ಠಾಣೆಗೆ ಸುನೀತಾ ಚೌಹಾಣ್ ಆಗಮಿಸಿದ್ದರು. ಬಳಿಕ ಅವರನ್ನು ಸ್ಥಳ ಮಹಜರಿಗಾಗಿ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಮನೆಗೆ ಕರೆದುಕೊಂಡು ಹೋಗಿದ್ದಾರೆ.