ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅಲ್ಲದೇ ಸಾಕಷ್ಟು ಅನಾಹುತ ಸಂಭವಿಸಿದೆ.
ಪ್ರಧಾನ ಮಂತ್ರಿ ಇಂಟರ್ನ್ಶಿಪ್ ಯೋಜನೆ: ಯುವ ಪದವೀಧರರು ಓದಲೇಬೇಕಾದ ಸ್ಟೋರಿ!
ನಗರದ ಟೌನ್ಹಾಲ್, ರಿಚ್ಮಂಡ್ ಟೌನ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಸುತ್ತ ಮತ್ತೆ ಮಳೆ ಅಬ್ಬರಿಸಿತು. ಸಂಜೆ ವೇಳೆಗೆ ಪುನಃ ಸುರಿದ ಮಳೆ ಟೌನ್ಹಾಲ್, ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಹನ ಸವಾರರು ಪರದಾಡುವಂತೆ ಮಾಡಿತು. ನಗರದ ಹಲವೆಡೆ ರಸ್ತೆಗೆ ಮರಗಳು ಉರುಳಿಬಿದ್ದು ಸಂಚಾರಕ್ಕೆ ಅಡಚಣೆಯಾಯಿತು.
ರಾಜಾಜಿನಗರದ ಶಿವನಹಳ್ಳಿ ಸಿಗ್ನಲ್ ಬಳಿ ರಸ್ತೆಗೆ ಅಡ್ಡಲಾಗಿ ಮರದ ರೆಂಬೆ ಕೊಂಬೆಗಳು ಬಿದ್ದಿದ್ದು, ಟ್ರಾಫಿಕ್ ಜಾಮ್ ಉಂಟಾಯಿತು.