ಬೆಂಗಳೂರು:- ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಸಾರ್ವಜನಿಕರಿಗೆ ಜಾಗೃತಿ ಸಂದೇಶ ರವಾನಿಸಿದ್ದಾರೆ.
ಲೋಕೋ ಪೈಲಟ್ಗಳ ಸಮಯಪ್ರಜ್ಞೆ: ರೈಲ್ವೆ ಹಳಿ ದಾಟುತ್ತಿದ್ದ 60 ಆನೆಗಳ ರಕ್ಷಣೆ!
ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸಚಿವರು ಮನವಿ ಮಾಡಿದ್ದಾರೆ.
ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.
ಹಸಿರು ಪಟಾಕಿ ಮಾತ್ರವೇ ಬಳಸಿ. ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.